ಅರ್ಜುನ್ ಜನ್ಯ ರವರು ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಕಾರ್ಯಕ್ರಮಕ್ಕೆ ಪಡೆಯುವ ಸಂಭಾವನೆ ಎಷ್ಟು ಗೊತ್ತಾ??
ನಮಸ್ಕಾರ ಸ್ನೇಹಿತರೇ ನಿಮಗೆಲ್ಲರಿಗೂ ತಿಳಿದಿರುವಂತೆ ಕನ್ನಡದ ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಕಾರ್ಯಕ್ರಮ ಮತ್ತೊಮ್ಮೆ ಕಿರುತೆರೆಯಲ್ಲಿ ಬಹಳ ಅದ್ಭುತವಾಗಿ ಮೂಡಿ ಬರುತ್ತಿದೆ, ಪ್ರೇಕ್ಷಕರು ಈ ಬಾರಿಯೂ ಕೂಡ ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಕಾರ್ಯಕ್ರಮವನ್ನು ಬಹಳ ಇಷ್ಟಪಟ್ಟು ನೋಡಲಾರಂಭಿಸಿದ್ದಾರೆ.
ಇನ್ನು ಸ್ಪರ್ಧಿಗಳು ಕೂಡ ನಮಗೆ ಸಿಕ್ಕ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳುವ ನಿಟ್ಟಿನಲ್ಲಿ ಬಹಳ ಅದ್ಭುತವಾಗಿ ಡ್ಯಾನ್ಸ್ ಮಾಡುವ ಮೂಲಕ ಪ್ರೇಕ್ಷಕರನ್ನು ಮನರಂಜಿಸುವಲ್ಲಿ ಯಶಸ್ವಿಯಾಗಿದ್ದಾರೆ, ಈ ಬಾರಿಯೂ ಕೂಡ ಪ್ರತಿಸ್ಪರ್ಧಿಗಳ ನಡುವೆ ಭಾರೀ ಪೈಪೋಟಿ ನಡೆಯುತ್ತಿದೆ. ಒಟ್ಟಿನಲ್ಲಿ ಈ ಬಾರಿ ಯಾರು ವಿಜೇತರು ಆಗುತ್ತಾರೆ ಎಂಬ ಕುತೂಹಲ ಎಲ್ಲರಲ್ಲಿದೆ.
ಇನ್ನು ಈ ಕಾರ್ಯಕ್ರಮದಲ್ಲಿ ತೀರ್ಪುಗಾರರಾಗಿ ಕಾಣಿಸಿಕೊಳ್ಳುವ ಅರ್ಜುನ್ ಜನ್ಯ ರವರು ಈ ಬಾರಿಯೂ ಕೂಡ ತೀರ್ಪುಗಾರರಾಗಿ ಕಾಣಿಸಿ ಕೊಂಡಿದ್ದಾರೆ. ಸ್ಯಾಂಡಲ್ವುಡ್ನಲ್ಲಿ ತಮ್ಮ ಮ್ಯೂಸಿಕ್ ಮೂಲಕ ಲಕ್ಷಾಂತರ ಅಭಿಮಾನಿಗಳನ್ನು ಗಳಿಸಿರುವ ಅರ್ಜುನ್ ಜನ್ಯ ರವರು, ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಕಾರ್ಯಕ್ರಮದಲ್ಲೂ ಕೂಡಾ ಪ್ರೇಕ್ಷಕರ ಮನಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನು ಹೀಗೆ ಭಾರೀ ಜನಪ್ರಿಯತೆಯನ್ನು ಪಡೆದು ಕೊಳ್ಳುತ್ತಿರುವ ಅರ್ಜುನ್ ಜನ್ಯ ರವರು ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಕಾರ್ಯಕ್ರಮಕ್ಕೆ 1 ಎಪಿಸೋಡೆ ಬರೋಬರಿ 1.2 ಲಕ್ಷ ರೂಪಾಯಿಗಳನ್ನು ಸಂಭಾವನೆ ಪಡೆದುಕೊಳ್ಳುತ್ತಾರೆ ಎಂಬುದು ತಿಳಿದು ಬಂದಿದೆ.