ಬೆಂಗಳೂರಿನಲ್ಲಿ ಮತ್ತೊಂದು ಕಡೆ ಉದ್ಯೋಗಾವಕಾಶ, ಜಿಕೆವಿಕೆ ಯಲ್ಲಿ ಆಸಕ್ತರಿಗೆ ಖಾಲಿ ಇದೆ ಉದ್ಯೋಗ, ಅರ್ಹತೆ ಹಾಗೂ ಹೇಗೆ ಅರ್ಜಿ ಸಲ್ಲುಸುವುದು ನಿಮಗೆ ಗೊತ್ತೇ??
ನಮಸ್ಕಾರ ಸ್ನೇಹಿತರೇ, ನಿಮಗೆ ಬೋಧನೆಯಲ್ಲಿ ಆಸಕ್ತಿಯಿದ್ದರೆ, ಅನುಭವವಿದ್ದರೆ ಬೆಂಗಳೂರಿನ ಜಿಕೆವಿಕೆಯಲ್ಲಿ ಉದ್ಯೋಗಾವಕಾಶಗಳಿವೆ. ಬೆಂಗಳೂರಿನ ಗಾಂಧಿ ಕೃಷಿ ವಿಜ್ಞಾನ ಕೇಂದ್ರ ತನ್ನಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಬನ್ನಿ ಈ ಬಗ್ಗೆ ಇನ್ನಷ್ಟು ಮಾಹಿತಿಗಳನ್ನು ತಿಳಿಸಿಕೊಡ್ತೀವಿ.
ಜಿಕೆವಿಕೆಯಲ್ಲಿ ಖಾಲಿಇರುವ ಒಟ್ಟೂ ಹುದ್ದೆಗಳು 19. ಅವುಗಳಲ್ಲಿ ಅಸಿಸ್ಟೆಂಟ್ ಪ್ರೊಫೆಸರ್- 15 ಹುದ್ದೆಗಳು ಹಾಗೂ ಫಾರ್ಮ್ ಮ್ಯಾನೇಜರ್ -4 ಹುದ್ದೆಗಳು ಖಾಲಿ ಇವೆ. ನೀವು ಬೆಂಗಳೂರಿನಲ್ಲಿಯೇ ಕೆಲಸ ಹುಡುಕುತ್ತಿದ್ದರೆ ಇದು ಉತ್ತಮ ಅವಕಾಶ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಈಗಾಗಲೇ ಆರಂಭವಾಗಿದ್ದು, ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಮಾರ್ಚ್ 9 ಕೊನೆಯ ದಿನಾಂಕವಾಗಿದೆ. ಅರ್ಜಿಯನ್ನು ಆಫ್ಲೈನ್ ಮೂಲಕ ಸಲ್ಲಿಸತಕ್ಕದ್ದು.
ಇನ್ನು ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗೆ ಸ್ನಾತಕೋತ್ತರ ಪದವಿ, ಪಿಎಚ್ಡಿ ಹಾಗೂ ಫಾರ್ಮ್ ಮ್ಯಾನೇಜರ್ ಹುದ್ದೆಗೆ ಅಗ್ರಿಕಲ್ಚರ್/ಹಾರ್ಟಿಕಲ್ಚರ್/ಫಾರೆಸ್ಟ್ರಿ/ಸಿರಿಕಲ್ಚರ್/ಅಗ್ರಿಕಲ್ಚರಲ್ ಮಾರ್ಕೆಟಿಂಗ್ & ಕಾರ್ಪೊರೇಷನ್ನಲ್ಲಿ ಪದವಿ ಪಡೆದಿರಬೇಕು. ಹಾಗೆಯೇ ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗೆ 42 ವರ್ಷ ಹಾಗೂ ಫಾರ್ಮ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಸಲ್ಲಿಸುವವರು 40 ವರ್ಷ ವಯಸ್ಸಿನಒಳಗಿನವರಾಗಿರಬೇಕು. ಒಬಿಸಿ ಅಭ್ಯರ್ಥಿಗಳಿಗೆ 1 ವರ್ಷ ಹಾಗೂ ಎಸ್ ಸಿ ಎಸ್ ಟಿ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ಇರುತ್ತದೆ.
ಇನ್ನು ಅರ್ಜಿ ಶುಲ್ಕದ ಬಗ್ಗೆ ಮಾಹಿತಿ ಇಲ್ಲಿದೆ: ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗೆ ಎಸ್ ಸಿ ಎಸ್ ಟಿ ಅಭ್ಯರ್ಥಿಗಳು: ರೂ.1000 ಹಾಗೂ ಎಲ್ಲಾ ಇತರ ಅಭ್ಯರ್ಥಿಗಳು: ರೂ.2000 ಗಳನ್ನು ಅರ್ಜಿ ಶುಲ್ಕವಾಗಿ ಪಾವತಿಸಬೇಕು. ಮಾಜಿ ಸೈನಿಕ/ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇಲ್ಲ. ಡಿಮ್ಯಾಂಡ್ ಡ್ರಾಫ್ಟ್ ಮೂಲಕ ಶುಲ್ಕ ಪಾವತಿಸತಕ್ಕದ್ದು. ಹಾಗೆಯೇ ಫಾರ್ಮ್ ಮ್ಯಾನೇಜರ್ ಹುದ್ದೆಗೆ ಎಸ್ ಸಿ ಎಸ್ ಟಿ ಅಭ್ಯರ್ಥಿಗಳು: ರೂ. 500 ಹಾಗೂ ಎಲ್ಲಾ ಇತರ ಅಭ್ಯರ್ಥಿಗಳು: ರೂ.1000 ಗಳನ್ನು ಅರ್ಜಿ ಶುಲ್ಕವಾಗಿ ಪಾವತಿಸಬೇಕು. ಮಾಜಿ ಸೈನಿಕ/ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇಲ್ಲ
ಆಯ್ಕೆಯಾದ ಅಭ್ಯರ್ಥಿಗಳಿಗೆ ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗೆ ತಿಂಗಳಿಗೆ ರೂ. 57,700-1,82,400 ಹಾಗೂ ಫಾರ್ಮ್ ಮ್ಯಾನೇಜರ್ ಹುದ್ದೆಗೆ ತಿಂಗಳಿಗೆ 35,400-1,12,400 ಸಂಬಳ ನಿಗದಿಪಡಿಸಲಾಗಿದೆ. ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಆಸಕ್ತ ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ಹಾಗೂ ಅಗತ್ಯ ದಾಖಲಾತಿಗಳೊಂದಿಗೆ ಈ ವಿಳಾಸಕ್ಕೆ ಕಳುಹಿಸಿ. ವಿಳಾಸ: ಆಡಳಿತಾಧಿಕಾರಿ, ಕೃಷಿ ವಿಜ್ಞಾನ ವಿಶ್ವವಿದ್ಯಾಲಯ, ಜಿಕೆವಿಕೆ, ಬೆಂಗಳೂರು-560065, ಕರ್ನಾಟಕ ಅಧಿಕೃತ ವೆಬ್ಸೈಟ್ uasbangalore.edu.in ಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿ ಪಡೆದುಕೊಳ್ಳಬಹುದು.