ನೀವು ಜಸ್ಟ್ SSLC ಪಾಸ್ ಮಾಡಿದ್ದರೇ ಸಾಕು ಲಿಖಿತ ಪರೀಕ್ಷೆ ಇಲ್ಲದೇ ತಿಂಗಳಿಗೆ 28 ಸಾವಿರ ನೀವು ಸರ್ಕಾರೀ ನೌಕರಿ. ಅರ್ಜಿ ಹೇಗೆ ಸಲ್ಲಿಸಬೇಕು ಗೊತ್ತೇ??
ನಮಸ್ಕಾರ ಸ್ನೇಹಿತರೇ, ನೀವು ಹತ್ತನೇ ತರಗತಿ ಪಾಸ್ ಆಗಿದ್ದು, ಕೆಲಸ ಹುಡುಕುತ್ತಿದ್ದರೆ ಕರ್ನಾಟಕದ ನೋಂದಣಿ ಮತ್ತು ಮುದ್ರಾಂಕ ಇಲಾಖೆಯಲ್ಲಿ ಅದ್ಯೋಗಾವಕಾಶವಿದೆ. ಐಜಿಆರ್ ತನ್ನಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಈ ಬಗ್ಗೆ ಹೆಚ್ಚಿನ ವಿವರ ಈ ಕೆಳಕಂಡತಿದೆ.
ನೋಂದಣಿ ಮತ್ತು ಮುದ್ರಾಂಕ ಇಲಾಖೆ ಕರ್ನಾಟಕ, ಇಲ್ಲಿ ಭರ್ತಿಯಾಗಬೇಕಿರುವ ಹುದ್ದೆ ಗ್ರೂಪ್ ಡಿ (ಪ್ಯೂನ್) ಹುದ್ದೆ. ಸದ್ಯ ಒಂದು ಪೋಸ್ಟ್ ಖಾಲಿ ಇದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ 10ನೇ ತರಗತಿ ಪಾಸ್ ಆಗಿರಬೇಕು. ಇನ್ನು ಆಯ್ಕೆಯಾದ ಅಭ್ಯರ್ಥಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ಆಗಲಿದೆ. ಅಭ್ಯರ್ಥಿಗಳು ಅರ್ಜಿಯನ್ನು ಆಫ್ ಲೈನ್ ಮೂಲಕ ಸಲ್ಲಿಸಬೇಕು. ಫೆಬ್ರವರಿ 17ರಿಂದ ಅರ್ಜ್ ಸಲ್ಲಿಕೆ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು ಮಾರ್ಚ್ 31 ಕೊನೆಯ ದಿನಾಂಕವಾಗಿದೆ.
ನೋಂದಣಿ ಮತ್ತು ಮುದ್ರಾಂಕ ಇಲಾಖೆ ಕರ್ನಾಟಕ ನೇಮಕಾತಿ ಅಧಿಸೂಚನೆ ಪ್ರಕಾರ, ಗ್ರೂಪ್ ಡಿ (ಪ್ಯೂನ್) ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 18-40 ವರ್ಷದೊಳಗಿರಬೇಕು. ಆಯ್ಕೆಯಾದ ಅಭ್ಯರ್ಥಿಗೆ ತಿಂಗಳಿಗೆ ರೂ. 17,000-28,950ರೂ ಸಂಬಳ ನೀಡಲಾಗುತ್ತದೆ. ವೇತನ ನೀಡಲಾಗುತ್ತದೆ. ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಹುದ್ದೆಗೆ ಆಯ್ಕೆ ಮಾಡಲಾಗುತ್ತದೆ. ಈ ಹುದ್ದೆಗೆ ಅರ್ಜಿ ಸಲ್ಲಿಸಲು ಆಸಕ್ತಿ ಇರುವ ಅಭ್ಯರ್ಥಿಗಳು ತಮ್ಮ ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ವಿಳಾಸಕ್ಕೆ ಕಳುಹಿಸಿ. ವಿಳಾಸ: ನೋಂದಣಿ ಸೂಪರಿಂಟೆಂಡೆಂಟ್ ಮತ್ತು ಪ್ರಿಂಟರ್ಸ್ ಕಮಿಷನರ್ ಕಛೇರಿ, ಕಂದಾಯ ಭವನ, 08 ನೇ ಮಹಡಿ, ಕೆ.ಜಿ ರಸ್ತೆ, ಬೆಂಗಳೂರು – 560009 ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್ಸೈಟ್ www.igr.karnataka.gov.in ಬೇಟಿ ನೀಡಿ.