ವ್ಯಾಪಕವಾಗಿ ಟೀಕೆಗೆ ಗುರಿಯಾದ ತಂಬಾಕು ಜಾಹೀರಾತಿನಲ್ಲಿ ಕಾಣಿಸಿಕೊಂಡ ಅಕ್ಷಯ್ ಕುಮಾರ್; ಟೀಕೆಗೆ ಪ್ರತಿಯಾಗಿ ಅಕ್ಷಯ್ ಕುಮಾರ್ ಪತ್ರದಲ್ಲಿ ಬರೆದಿದ್ದೇನು ಗೊತ್ತೆ??

24

Get real time updates directly on you device, subscribe now.

ನಮಸ್ಕಾರ ಸ್ನೇಹಿತರೇ ಬಾಲಿವುಡ್ ಚಿತ್ರರಂಗದಲ್ಲಿ ಒಂದು ಕಾರಣಕ್ಕಾಗಿ ಸುದ್ದಿ ಆಗುತ್ತಲೇ ಇರುತ್ತದೆ. ಬಾಲಿವುಡ್ ಚಿತ್ರರಂಗದಲ್ಲಿ ಮಸಾಲೆಭರಿತ ಸುದ್ದಿ ಇಲ್ಲವೆಂದರೆ ಅದು ಬಾಲಿವುಡ್ಡೇ ಅಲ್ಲ ಎಂದು ಹೇಳಬಹುದಾಗಿದೆ. ಇನ್ನು ಇತ್ತೀಚಿನ ದಿನಗಳಲ್ಲಿ ಅಕ್ಷಯ್ ಕುಮಾರ್ ಅವರ ಕುರಿತಂತೆ ಒಂದು ವಿಚಾರ ದೊಡ್ಡ ಮಟ್ಟದಲ್ಲಿ ಸುದ್ದಿ ಮಾಡುತ್ತಿದ್ದು ಇದು ಅವರ ವಿರುದ್ಧವಾಗಿ ಸುದ್ದಿ ಮಾಡುತ್ತಿದೆ ಎಂದರೆ ತಪ್ಪಾಗಲಾರದು. ಸಾಮಾನ್ಯವಾಗಿ ಅಕ್ಷಯ್ ಕುಮಾರ್ ಆಗಾಗ ಸಿನಿಮಾಗಳ ವಿಚಾರದಲ್ಲಿ ಹಾಗೂ ಸಾಮಾನ್ಯವಾಗಿ ಒಳ್ಳೆಯ ವಿಚಾರಕ್ಕಾಗಿ ಸುದ್ದಿಯಾಗುತ್ತಿದ್ದರು.

ಆದರೆ ಇತ್ತೀಚಿಗಷ್ಟೇ ಅಜಯ್ ದೇವಗನ್ ಹಾಗೂ ಶಾರುಖ್ ಖಾನ್ ಅವರ ಜೊತೆಗೆ ವಿಮಲ್ ಎನ್ನುವ ತಂ’ಬಾಕು ಉತ್ಪನ್ನದ ಜಾಹೀರಾತಿನಲ್ಲಿ ಕಾಣಿಸಿಕೊಂಡು ದೊಡ್ಡಮಟ್ಟದಲ್ಲಿ ನ್ಯೂಸೆನ್ಸ್ ಕ್ರಿಯೇಟ್ ಮಾಡಿದ್ದರು. ಈಗಿಂದ ಸಂದರ್ಶನವೊಂದರಲ್ಲಿ ಎಷ್ಟೇ ಹಣ ಸಿಕ್ಕರೂ ಕೂಡ ನಾನು ಇಂತಹ ತಂಬಾ’ಕು ಮಾದರಿಯ ಜಾಹೀರಾತುಗಳಲ್ಲಿ ಕಾಣಿಸಿಕೊಳ್ಳುವುದು ಎಂಬುದಾಗಿ ಹೇಳಿಕೊಂಡಿದ್ದರು. ಆದರೆ ಈಗ ಅವರು ವಿಮಲ್ ಜಾಹಿರಾತಿನಲ್ಲಿ ಕಾಣಿಸಿಕೊಂಡಿರುವುದು ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದು ಅಕ್ಷಯ್ ಕುಮಾರ್ ಅವರು ಸಾಮಾಜಿಕ ಜಾಲತಾಣಗಳಲ್ಲಿ ಸರಿಯಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.

ಅಕ್ಷಯ್ ಕುಮಾರ್ ಅವರಿಗೆ ಯಾವರೀತಿಯಲ್ಲಿ ಅಭಿಮಾನಿಗಳು ಕ್ಲಾಸ್ ತೆಗೆದುಕೊಂಡಿದ್ದಾರೆ ಎಂದರೆ ಇದರ ಕುರಿತಂತೆ ಸ್ವತಃ ಅಕ್ಷಯ್ ಕುಮಾರ್ ಅವರೇ ಸೋಶಿಯಲ್ ಮೀಡಿಯಾದಲ್ಲಿ ಪತ್ರವನ್ನೂ ಬರೆದಿದ್ದಾರೆ. ಈ ಪತ್ರದಲ್ಲಿ ಅಕ್ಷಯ್ ಕುಮಾರ್ ಅವರು ಈ ಜಾಹೀರಾತಿನಲ್ಲಿ ನಟಿಸುವ ಮೂಲಕ ನಿಮ್ಮ ಭಾವನೆಗಳಿಗೆ ಧಕ್ಕೆ ಆಗಿದ್ದರೆ ಕ್ಷಮೆ ಇರಲಿ. ನಿಮ್ಮಿಂದಲೇ ನಾನು ಈ ಹಂತಕ್ಕೆ ಬಂದಿರುವುದು. ಹೀಗಾಗಿ ನಿಮ್ಮ ಇಚ್ಚೆಗೆ ವಿರುದ್ಧವಾಗಿ ಯಾವುದೇ ಕೆಲಸಗಳನ್ನು ಮಾಡಲು ಹೋಗುವುದಿಲ್ಲ. ಇನ್ನು ಮುಂದೆ ಇಂತಹ ಜಾಹೀರಾತುಗಳಲ್ಲಿ ಕಾಣಿಸಿಕೊಳ್ಳುವುದಕ್ಕೆ ಹೋಗುವುದಿಲ್ಲ ಎಂಬುದಾಗಿ ಕೂಡ ಹೇಳಿದ್ದು, ಈ ಜಾಹೀರಾತು ಕಾಂಟಾಕ್ಟ್ ಅವಧಿ ಇರುವವರೆಗೂ ಪ್ರಸಾರ ಆಗುತ್ತದೆ ಇದಕ್ಕಾಗಿ ಕ್ಷಮೆ ಇರಲಿ ಇದರಿಂದ ಪಡೆದಿರುವ ಅಂತಹ ಹಣವನ್ನು ಒಳ್ಳೆಯ ಕೆಲಸಕ್ಕಾಗಿ ವಿನಿಯೋಗಿಸುತ್ತೇನೆ ಎಂಬುದಾಗಿ ಅಕ್ಷಯ್ ಕುಮಾರ್ ಅವರು ಪತ್ರದಲ್ಲಿ ಬರೆದಿದ್ದಾರೆ. ಅಕ್ಷಯ್ ಕುಮಾರ್ ಅವರ ಈ ಪ್ರತಿಕ್ರಿಯೆಗೆ ನಿಮ್ಮ ಅನಿಸಿಕೆಗೆ ಹಾಗೂ ಅಭಿಪ್ರಾಯಗಳನ್ನು ನಮ್ಮೊಂದಿಗೆ ತಪ್ಪದೆ ಹಂಚಿಕೊಳ್ಳುವುದನ್ನು ಮಾತ್ರ ಮರೆಯಬೇಡಿ.

Get real time updates directly on you device, subscribe now.