ತಮ್ಮ ಪತ್ನಿ ವಿಜಯಲಕ್ಷ್ಮಿ ರವರಿಗಾಗಿ ಕರುನಾಡಿನ ಅಸಲಿ ದೊರೆ ದರ್ಶನ್ ರವರ ಮಾಡಿರುವ ಕೆಲಸ ಏನು ಗೊತ್ತೇ??
ನಮಸ್ಕಾರ ಸ್ನೇಹಿತರೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ರವರನ್ನು ಕನ್ನಡ ಚಿತ್ರರಂಗದ ಬಾಕ್ಸ್ ಆಫೀಸ್ ಸುಲ್ತಾನ್ ಎನ್ನುವುದಾಗಿ ಕರೆಯಲಾಗುತ್ತದೆ. ಕಷ್ಟದಿಂದಲೇ ಮೇಲೆದ್ದು ಬಂದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಮಿಡಲ್ ಕ್ಲಾಸ್ ಫ್ಯಾಮಿಲಿ ಯುವಜನತೆಗೆ ನಿಜ ಕೂಡ ಸ್ಪೂರ್ತಿ ಎಂದರೆ ತಪ್ಪಾಗಲಾರದು. ಇಂದು ಕನ್ನಡ ಚಿತ್ರರಂಗದಲ್ಲಿ ಅತ್ಯಂತ ಹೆಚ್ಚು ಸಂಭಾವನೆ ಪಡೆಯುವ ಹಾಗೂ ಅತ್ಯಂತ ಹೆಚ್ಚು ಬೇಡಿಕೆಯಲ್ಲಿರುವ ನಟರಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಮೊದಲನೇ ಸ್ಥಾನದಲ್ಲಿ ಕಾಣಿಸಿಕೊಳ್ಳುತ್ತಾರೆ. ಅಭಿಮಾನಿಗಳು ಇವರನ್ನು ಪ್ರೀತಿಯಿಂದ ಡಿಬಾಸ್ ಎಂದೇ ಕರೆಯುತ್ತಾರೆ.
ಅಭಿಮಾನಿಗಳನ್ನು ಕೂಡ ಡಿ ಬಾಸ್ ಸೆಲೆಬ್ರೆಟಿಗಳು ಎನ್ನುವುದಾಗಿ ಕರೆಯುತ್ತಾರೆ. ಡಿ ಬಾಸ್ ರವರ ವೈಯಕ್ತಿಕ ಜೀವನದ ಕುರಿತಂತೆ ಮಾತನಾಡುವುದಾದರೆ ವಿಜಯಲಕ್ಷ್ಮಿಯವರನ್ನು ಕಾಮನ್ ಫ್ರೆಂಡ್ ಮೂಲಕ ಪರಿಚಯ ಮಾಡಿಕೊಂಡು ಇವರಿಬ್ಬರ ನಡುವೆ ಪ್ರೀತಿ ಮೂಡಿ ಮನೆಯವರ ಒಪ್ಪಿಗೆ ಮೇರೆಗೆ ಅರೆಂಜ್ ಮ್ಯಾರೇಜ್ ಆಗುತ್ತಾರೆ. ಇವರಿಬ್ಬರ ಸಂಸಾರದಲ್ಲಿ ಹಿಂದೆ ಹಲವಾರು ಸಮಸ್ಯೆಗಳು ಕಂಡು ಬಂದಿರಬಹುದು ಆದರೆ ಸದ್ಯದ ಮಟ್ಟಿಗೆ ಜಗತ್ತೇ ಮೆಚ್ಚುವಂತೆ ಪರಸ್ಪರ ಅನ್ಯೋನ್ಯವಾಗಿ ಬಾಳುತ್ತಿದ್ದಾರೆ. ದರ್ಶನ್ ರವರು ಚಿತ್ರೀಕರಣದ ಸಂದರ್ಭದಲ್ಲಿ ಹೆಚ್ಚಾಗಿ ಬ್ಯುಸಿ ಇರುವ ಕಾರಣದಿಂದಾಗಿ ಮನೆಯವರಿಗೆ ಹೆಚ್ಚಿನ ಸಮಯವನ್ನು ನೀಡಲು ಸಾಧ್ಯವಾಗುವುದಿಲ್ಲ. ಆದರೆ ಆಗಾಗ ಬಿಡುವಾದಾಗಲೆಲ್ಲಾ ಹೆಂಡತಿ ವಿಜಯಲಕ್ಷ್ಮಿ ಹಾಗೂ ಮಗ ವಿನೀಶ್ ಜೊತೆಗೆ ದೇವಸ್ಥಾನಗಳ ಪರ್ಯಟನೆಯನ್ನು ಆಗಾಗ ಮಾಡುತ್ತಲೇ ಇರುತ್ತಾರೆ. ಇನ್ನು ಇತ್ತೀಚಿಗಷ್ಟೇ ತಮ್ಮ ಪತ್ನಿ ವಿಜಯಲಕ್ಷ್ಮಿ ಅವರಿಗೆ ಸರ್ಪ್ರೈಸ್ ಗಿಫ್ಟ್ ನೀಡಿದ್ದಾರೆ.
ಹೌದು ಗೆಳೆಯರು ಸದ್ಯಕ್ಕೆ ನಿಮಗೆಲ್ಲರಿಗೂ ತಿಳಿದಿರುವ ಹಾಗೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ರವರು ಬಿ ಹರಿಕೃಷ್ಣ ನಿರ್ದೇಶನದಲ್ಲಿ ಹಾಗೂ ಶೈಲಜಾ ನಾಗ್ ನಿರ್ಮಾಣದಲ್ಲಿ ಮೂಡಿಬರುತ್ತಿರುವ ಕ್ರಾಂತಿ ಸಿನಿಮಾದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ ಹಾಗೂ ಮೈಸೂರಿನಲ್ಲಿ ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ತಮ್ಮ ಪತ್ನಿ ವಿಜಯಲಕ್ಷ್ಮಿ ಅವರಿಗಾಗಿ ಮೈಸೂರಿನ ತಮ್ಮ ಫಾರ್ಮ್ ಹೌಸ್ ನಲ್ಲಿ ಮನೆಯೊಂದನ್ನು ಕಟ್ಟಿಸಿ ಕೊಟ್ಟಿದ್ದಾರೆ. ಇದು ನಿಜಕ್ಕೂ ಕೂಡ ವಿಜಯಲಕ್ಷ್ಮಿ ಅವರಿಗೆ ಸಂತೋಷವನ್ನು ನೀಡಿದ್ದು ದರ್ಶನ್ ರವರ ಅಭಿಮಾನಿಗಳಲ್ಲಿ ಕೂಡ ಸಂತೋಷದ ಮನೆಮಾಡಿದೆ.