ನೀವು PUC, ITI, ಡಿಪ್ಲೊಮಾ ಪಾಸ್ ಮಾಡಿದ್ದರೇ ಸಾಕು ಒಂದು ರೂಪಾಯಿ ಲಂಚ ಕೊಡದೆ ಸರ್ಕಾರೀ ಉದ್ಯೋಗ. ಅರ್ಜಿ ಹೇಗೆ ಸಲ್ಲಿಸಬೇಕು ಗೊತ್ತೇ??

AMP Ads

ನಮಸ್ಕಾರ ಸ್ನೇಹಿತರೇ, ಇತ್ತೀಚಿಗೆ ಸರ್ಕಾರದ ಎಲ್ಲಾ ಬೇರೆ ಬೇರೆ ಕ್ಷೇತ್ರಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ಪ್ರಕ್ರಿಯೆ ಭರದಿಂದ ಸಾಗಿದೆ. 2022ರ ಆರಂಭದಲ್ಲೇ, ಹಲವು ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಕೆಲವು ಸೆಕ್ಟರ್ ಗಳಲ್ಲಿ ಅಭ್ಯರ್ಥಿ ಆಯ್ಕೆ ಪ್ರಕ್ರಿಯೆಯು ಮುಗಿದಿದೆ. ಇದೀಗ ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ದಲ್ಲಿರುವ 600 ಕ್ಕೂ ಹೆಚ್ಚಿನ ಹುದ್ದೆಗಳನ್ನು ಭರ್ತಿ ಮಾಡಲು ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಈ ಬಗ್ಗೆ ಸಂಪೂರ್ಣ ಮಾಹಿತಿ ಈ ಲೇಖನದಲ್ಲಿದೆ.

ಹೌದು, ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ (ಸೇಲ್) ದಲ್ಲಿ 639 ಅಪ್ರಂಟಿಸ್ ಹುದ್ದೆಗಳು ಭರ್ತಿಯಾಗಬೇಕಿವೆ. ಇದಕ್ಕೆ ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಇದೇ ತಿಂಗಳು ಅಂದರೆ ಫೆಬ್ರವರಿ 9 ರಿಂದ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಿದ್ದು, ಮಾರ್ಚ್ 6ರ ಒಳಗೆ ನಿಮ್ಮ ಅರ್ಜಿಯನ್ನು ಸಲ್ಲಿಸಬಹುದು. ಸೇಲ್ ನ ನೇಮಕಾತಿ ಅಧಿಸೂಚನೆ ಪ್ರಕಾರ, ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಸಂಸ್ಥೆಯಿಂದ ಪಿಯುಸಿ/ ಐಟಿಐ/ ಡಿಪ್ಲೊಮಾ ಇವುಗಳಲ್ಲಿ ಯಾವುದನ್ನಾದರೂ ಮುಗಿಸಿರಬೇಕು.

AMP Ad3

ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 15-24 ವರ್ಷ ವಯಸ್ಸಿನೊಳಗಿನವರಾಗಿರ ಬೇಕು. ಹಾಗೆಯೇ ಆಯ್ಕೆಯಾದ ಅಭ್ಯರ್ಥಿಗಳು ಜಾರ್ಖಂಡ್ನ ಪಲಮುನಲ್ಲಿ ಉದ್ಯೋಗ ಮಾಡಬೇಕಾಗುತ್ತದೆ. ಇನ್ನು ಸೇಲ್ ನ ನೇಮಕಾತಿ ಅಧಿಸೂಚನೆ ಪ್ರಕಾರ, ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ನಿಯಮಾನುಸಾರ ವೇತನ ನೀಡಲಾಗುತ್ತದೆ. ದಾಖಲಾತಿ ಪರಿಶೀಲನೆ ಹಾಗೂ ವೈಯಕ್ತಿಕ ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯುತ್ತದೆ. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ www.sail.co.in ವೆಬ್ ಸೈಟ್ ಗೆ ಭೇಟಿ ನೀಡಿ.

Comments (0)
Add Comment